ಬೆಂಗಳೂರು: ಕೊರೋನಾ ವೈರಾಣು ಸೋಂಕಿನ ಉಲ್ಬಣ ಹಾಗೂ ಒಮಿಕ್ರಾನ್ ವಕ್ಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿಯಮ ಘೋಷಿಸಲಾಗಿದೆ. ಡಿಸೆಂಬರ್ 28ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಬೆಂಗಳೂರಿನಲ್ಲಿಂದು ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಬಗ್ಗೆ ತಿಳಿಸಿದರು. ರಾತ್ರಿ 10ರಿಂದ ಬೆಳಿಗ್ಗೆ 5ಗಂಟೆವರೆಗೆ ಜನರ ಓಡಾಟಕ್ಕೆ ಬ್ರೇಕ್ ಹಾಕಲು ಸರ್ಕಾರ ಕ್ರಮ ಕೈಗೊಂಡಿದೆ. ಹೊಟೇಲ್, ಪಬ್, ಬಾರ್‌ಗಳಲ್ಲಿ ಶೇ.50 ಮಂದಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಭೆ, ಸಮಾರಂಗಳಲ್ಲೂ ಶೇ.50 ಮಂದಿಗೆ ಅವಕಾಶ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ.