ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ವಲಯದ ಜ್ಞಾನಭಾರತಿ ವಾರ್ಡ್ನ ನಾಗರಭಾವಿ ಮುಖ್ಯರಸ್ತೆಯ ಎನ್.ಜಿ.ಎಫ್ ಬಡಾವಣೆಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್ಗೆ ಕೋವಿಡ್ ಸೋಂಕಿನ ಅಲೆ ಅಪ್ಪಲಿಸಿದೆ.
ಈ ಹೊಟೇಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಪೈಕಿ ಒಬ್ಬ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆ ನೌಕರನನ್ನು ಸೂಕ್ತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಯಿಸಲಾಗಿದ್ದು, ಹೋಟೆಲ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಕೋವಿಡ್-19 ಪರೀಕ್ಷೆ ನಡೆಸಿ ಕ್ವಾರಂಟೈನ್ನಲ್ಲಿ ಇರಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆ.
ಈ ಹೋಟೆಲ್ನಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಲಾಗಿದ್ದು, ಹೋಟೆಲ್ನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಉಳಿದ ಸಿಬ್ಬಂದಿಗಳ ಕೋವಿಡ್-19 ಪರೀಕ್ಷೆಯ ಫಲಿತಾಂಶ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಬಿಬಿಎಂಪಿ ಆರ್.ಆರ್.ನಗರ ವಲಯದ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ತಿಳಿಸಿದ್ದಾರೆ.
ಇದೇ ಚೇಳೆ, ರಾಜರಾಜೇಶ್ವರಿನಗರ ವಲಯದಲ್ಲಿರುವ ಎಲ್ಲಾ ಹೋಟೆಲ್ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಿಸುವಂತೆ ಮತ್ತು ಕೋವಿಡ್-19 ಲಸಿಕೆ ಹಾಕಿಸುವಂತೆ ವಲಯ ಆಯುಕ್ತರು ರೆಡ್ಡಿ ಶಂಕರ ಬಾಬು ಅವರು ಹೋಟೆಲ್ ಮಾಲೀಕರಲ್ಲಿ ಮನವಿ ಮಾಡಿದ್ದಾರೆ ಎಂದು ಡಾ. ಬಾಲಸುಂದರ್, ಮಾಹಿತಿ ಹಂಚಿಕೊಂಡಿದ್ದಾರೆ.