ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ವಾರಾಂತ್ಯದ ದಿನವಾದ ಶನಿವಾರ ರಾಜ್ಯದಲ್ಲಿ 921 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆ ನಡುವೆ ನಡೆಸಲಾದ ಪರೀಕ್ಷೆಯಲ್ಲಿ ಈ ಪ್ರಮಾಣದ ಫಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಈ ನಡುವೆ, ಕೋವಿಡ್ ಸೋಂಕಿಗೆ ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯ 8,042 ಸಕ್ರಿಯ ಪ್ರಕರಣಗಳಿದ್ದು, 123 ಸೋಂಕಿತರು ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.