ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದ ಜಾನಪದ ಕಲಾವಿದ ವೀರಪ್ಪ ಕಾಳಿ ಕೊರೊನಾ ಲಸಿಕೆ ಪಡೆಯುವಂತೆ ಶನಿವಾರ ಮಧ್ಯಾಹ್ನ ಗ್ರಾಮದ ತುಂಬಾ ಡಂಗೂರ ಬಾರಿಸಿ ಕೂಗಿ ಹೇಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.
ಈಗ ಆ ವಿಡಿಯೋವನ್ನು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ ಅವ್ರು ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ. ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ಹಳ್ಳಿಯಲ್ಲಿ ಲಸಿಕೆಯ ಪಡೆಯುವುದರ ಬಗ್ಗೆ ಗ್ರಾಮೀಣ ಸಾಂಪ್ರದಾಯಕ ಪದ್ಧತಿ ಮೂಲಕ ಡಂಗೂರ ಬಾರಿಸಿ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣೆಯಾಗಿದೆ. ಇದೇ ಮಾದರಿಯಲ್ಲಿ ಕೋವಿಡ್–19 ಲಸಿಕೆಯ ಕುರಿತು ಜನಾಂದೊಲನ ದೇಶಾದ್ಯಂತ ಆಗಬೇಕು ಎಂದು ಬರೆದುಕೊಂಡಿದ್ದಾರೆ.
ಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ.
As PM @narendramodi ji said, Covid-19 vaccination drive should become a Janandolan. It's inspiring to see our villages using traditional methods to raise awareness. pic.twitter.com/cbKjJfY5ro
— Dr Sudhakar K (Modi ka Parivar) (@DrSudhakar_) March 13, 2021