ಗದಗ್: 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ಹಾಕಲ್ಲ. ಒಂದು ವಾರ ಮುಂದೂಡುವ ಸಾಧ್ಯತೆ ಇದೆ ಅಂತ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.
ಗದದ ಜಿಲ್ಲಾಡಳಿತ ಭವನದಲ್ಲಿ ಸಿ.ಎಂ ವಿಡಿಯೋ ಕಾನ್ಫರೆನ್ಸ್ ಹಾಗೂ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ರಾಜ್ಯಾದ್ಯಂತ 18 ವರ್ಷ ಮೆಲ್ಪಟ್ಟವರಿಗೆ ಲಸಿಕೆ ನೀಡುವುದು ತಡವಾಗಲಿದೆ. 1 ಮತ್ತು 2ನೇ ಹಂತದ ಲಸಿಕೆ ಮುಗಿಯಬೇಕಿದೆ. ಅಷ್ಟರಲ್ಲಿ ಇನ್ನಷ್ಟು ಡೋಸ್ ಸಂಗ್ರಹಿಸಿ ಮುಂದೆ ದಿನಾಂಕ ನಿಗದಿಯಾದ ನಂತರ ಲಸಿಕೆ ನೀಡಲಾಗುತ್ತದೆ ಎಂದರು.
ಪಾಸಿಟಿವ್ ಬಂದ ಎಲ್ಲರಿಗೂ ರೆಮ್ಡಿಸಿವಿರ್ ಇಂಜೆಕ್ಷನ್ ಕೊಡೋದಲ್ಲ. ಅವಶ್ಯಕತೆ ಇದ್ದವರಿಗೆ ಮಾತ್ರ ರೆಮ್ಡಿಸಿವಿರ್ ಕೊಡಿ ಅಂತ ಸಚಿವರು ವೈದ್ಯರಿಗೆ ಸಲಹೆ ಮಾಡಿದರು..
ಗದಗ ಜಿಲ್ಲೆ ಸರ್ಕಾರಿ ಆಸ್ಪತ್ರೆಯಲ್ಲಿ ರೆಮ್ಡಿಸಿವಿರ್ ಕೊರತೆ ಇಲ್ಲ. ಆದ್ರೆ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಕೊರತೆ ಇದೆ. ಜಿಲ್ಲೆಯಲ್ಲಿ 650 ಕೋವಿಡ್ ಸೋಂಕಿತರಿದ್ದಾರೆ. 182 ಜನ ಜಿಮ್ಸ್ ಸೇರಿ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರೆ, 72 ಜನ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 467 ಜನ ಹೋಮ್ ಐಸುಲೇಶನ್ ನಲ್ಲಿದ್ದಾರೆ. ಗದಗ ಜಿಲ್ಲೆಯಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಇಲ್ಲ. ಕೋವಿಡ್ ಕೇರ್ ಕೇಂದ್ರದಲ್ಲಿ 700 ಹಾಸಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 500 ಹಾಸಿಗೆ ವ್ಯವಸ್ಥೆ ಇದ್ದು, ಇನ್ನೂ 200 ಹೆಚ್ಚುವರಿ ಹಾಸಿಗೆ ವ್ಯವಸ್ಥೆಗೆ ಸಿದ್ದತೆ ಮಾಡಲಾಗುತ್ತಿದೆ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ 150 ಹಾಸಿಗೆ ವ್ಯವಸ್ಥೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡುಕೊಳ್ಳಲಾಗಿದೆ ಎಂದರು.