ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ನಿರ್ದೇಶನ ಬಂದಿಲ್ಲ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್-1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಎಂಬ ಮಾಹಿತಿ ಇದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದೆಂದು ಮನವಿ ಮಾಡಿದರು.
ಕೋವಿಡ್ ತಡೆಗೆ ಸರ್ಕಾರದ ತಯಾರಿ:
-
ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ 50 ಬೆಡ್‍ಗಳನ್ನು ಮೀಸಲಿಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
-
ವೈದ್ಯಕೀಯ ಕಾಲೇಜಿನಲ್ಲಿ 18,141 ಸರ್ಕಾರಿ ಆಸ್ಪತ್ರೆಗಳಲ್ಲಿ 10 ಸಾವಿರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರುವ ಆಸ್ಪತ್ರಗಳಲ್ಲಿ 11,500 ಹಾಸಿಗೆಗಳು ಇವೆ.
-
ಕೇರಳದಲ್ಲಿ ಕಾಣಿಸಿಕೊಂಡ ರೂಪಾಂತರ ಜೆಎನ್-1 ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲೂ ಒಂದು ವೇಳೆ ಹಬ್ಬಿದರೆ ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದೆಲ್ಲವನ್ನು ತೆಗೆದುಕೊಳ್ಳಲಾಗಿದೆ..
-
ಇಲಾಖೆಯಲ್ಲಿರುವ ಕೋವಿಡ್ ವಾರಿಯರ್ಸ್‍ಗಳು ಫ್ಲೂ-ಲಸಿಕೆಯನ್ನು ಪಡೆಯಬೇಕು.
-
ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮಥ್ರ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ.
-
ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ.
-
30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರೂ ಮತ್ತು ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು.