ಮುಂಬೈ: ತುಳುನಾಡ ಕುವರಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಲನಚಿತ್ರಗಳನ್ನು ಸೃಷ್ಟಿಸಿದ ಆರೋಪಗಳಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕೆಲ ಸಮಯದಿಂದ ತನಿಖೆಯನ್ನು ಬಿರುಸುಗೊಳಿಸಿದ್ದರು. ರಾಜ್ ಕುಂದ್ರಾ ಅವರ ವಿರುದ್ದ ಅಶ್ಲೀಲ ಚಲನಚಿತ್ರಗಳನ್ನು ಸೃಷ್ಟಿಸಿ ಆ್ಯಪ್‌ಗಳ ಮೂಲಕ ಪ್ರಸಾರ ಮಾಡುತ್ತಿದ್ದ ಬಗೆಗಿನ ಆರೋಪ ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಕ್ರೈಮ್ ಬ್ರಾಂಚ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಅನೇಕ ಮಂದಿ ಆರೋಪಿಗಳಾಗಿದ್ದಾರೆ. ರಾಜ್ ಕುಂದ್ರಾ ಅವರನ್ನೂ ಪ್ರಮುಖ ಆರೋಪಿಯಾಗಿ ಗುರುತಿಸಲಾಗಿದೆ