ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದೆ. ಹಿಂದೂಗಳ ಶ್ರದ್ಧಾಕೇಂದ್ರವಾಗಿರುವ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ನೇಮಕ ಮಾಡಿದೆ.
ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಕ್ಕಮಗಳೂರಿನ ಶಾಸಕರೂ ಆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಿಂದೂಗಳ ಸುಮಾರು ಐದು ದಶಕಗಳ ಹೋರಾಟಕ್ಕೆ ಸಂದ ಐತಿಹಾಸಿಕ ಜಯ ಇದಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಪ್ರಸಕ್ತ, ಗುಜರಾತ್‌ನಲ್ಲಿ ವಿಧಾನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಸಿ.ಟಿ.ರವಿ
ಹಿಂದೂಗಳ ಪವಿತ್ರ ಕ್ಷೇತ್ರ ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಿ.ಟಿ.ರವಿ, ಈ ಸಂಬಂಧ ಸೂಕ್ತ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) November 18, 2022
ದತ್ತಪೀಠಕ್ಕಾಗಿ ಸುದೀರ್ಘ ಕಾಲದಿಂದ ನಡೆಯುತ್ತಾ ಬಂದಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಿ.ಟಿ.ರವಿ, ತಮಗೆ ಬೆಂಬಲ ಸೂಚಿಸಿರುವ ಕಾರ್ಯಕರ್ತರನ್ನು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಶ್ರೀ ಗುರು ದತ್ತಾತ್ರೇಯರ ಪುಣ್ಯಸ್ಥಳದ ರಕ್ಷಣೆಗಾಗಿ ದಶಕಗಳಿಂದ ಹೋರಾಟಕ್ಕೆ ಕೈಜೋಡಿಸಿದ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ, ಭಕ್ತಾದಿಗಳಿಗೆ ಅಭಿನಂದನೆ ಸಲಿಸಿದ್ದಾರೆ