ಚಿಕ್ಕಮಗಳೂರು: ಇಹಲೋಕ ತ್ಯಜಿಸಿರುವ ಅರೆಸ್ಸೆಸ್ ಕಾರ್ಯಕರ್ತ, ಪ್ರಗತಿಪರ ಕೃಷಿಕ ಚಿಕ್ಕಮಗಳೂರಿನ ತಿಮ್ಮೇಗೌಡರ ನಿಧನಕ್ಕೆ ಶ್ರದ್ಧಾಂಜಲಿಯ ಮಹಾಪೂರವೇ ಹರಿದುಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ತಂದೆ ತಿಮ್ಮೇಗೌಡರು (92 ವರ್ಷ) ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಮತ್ತೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಶನಿವಾರ ಅವರು ಇಹಲೋಕ ತ್ಯಜಿಸಿದರು.
© 2020 Udaya News – Powered by RajasDigital.