ಬೆಂಗಳೂರು: ದಿನಕ್ಕೊಂದು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯ ಬಿಜೆಪಿಯಲ್ಲಿ ಇದೀಗ ವಿಜಯೇಂದ್ರ ನಡೆ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬುಧವಾರ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕ ನೀಡಿದ ವಿಜಯೇಂದ್ರ ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಅಮಿತ್ ಶಾ ಭೇಟಿ ಕುರಿತು ಸಾಮಾಜಿಕ ಜಾಲತಾಣ’X’ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನ ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ.
ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು.
ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ… pic.twitter.com/z9CFhFWpAv
— Vijayendra Yediyurappa (@BYVijayendra) January 1, 2025
ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನ ಕೋರಿರುವುದಾಗಿ ಅವರು ತಿಳಿಸಿದ್ದಾರೆ.
ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಅಮಿತ್ ಶಾ ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.