ಚಿಕ್ಕಬಳ್ಳಾಪುರ: ಗೌರಿಬಿದನೂರು ಸಮೀಪ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗೌರಿಬಿದನೂರಿನ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದ್ದು ಆ ಸಂದರ್ಭದಲ್ಲಿ ಹಲವಾರು ಸ್ಥಳದಲ್ಲಿದ್ದರೆನ್ನಲಾಗಿದೆ. ಈ ಪೈಕಿ ನಾಗೇನಹಳ್ಳಿ ನಿವಾಸಿಯೊಬ್ಬರು ಮೃತಪಟ್ಟಿದ್ದು ೧೫ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆನ್ನಲಾಗಿದೆ.


























































