ಕಲಬುರಗಿ – ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಾಗಿ ಲಾಕ್‌ಡೌನ್ ಹಾಗೂ ನಿಷೇಧಾಜ್ಞೆ ಜಾರಿ ಇರುವ ಕಾರಣ ಪಡಿತರ ಪದಾರ್ಥಗಳು ಆವಶ್ಯಕ ವಸ್ತುಗಳ ವಿತರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಂಟ್ರೋಲ್ ರೂಂ ತೆರೆಯಲಾಗಿದೆ.
ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ
ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕಂಟ್ರೋಲ್ ರೂಂ ಅರಂಭಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಸಚಿವರ ಸೂಚನೆಯಂತೆ ಜಿಲ್ಲಾಡಳಿತ ಕಂಟ್ರೋಲ್ ರೂಂಗಳನ್ನು ತೆರೆದಿದ್ದು ಇದು 24 / 7 ಗಂಟೆಯೂ ಕಾರ್ಯನಿರ್ವಹಿಸಲಿವೆ.
ಜನತಾ ಕಪ್ಯೂ೯, ಲಾಕ್‌ಡೌನ್ ವಿಧಿಸಿರುವುದರಿಂದ ಅಗತ್ಯ ವಸ್ತುಗಳ ಉತ್ಪಾಾದನೆ, ಸಂಗ್ರಹಣೆ, ಸಾಗಾಣಿಕೆ ಮತ್ತು ಪೂರೈಕೆಗೆ ಸಂಬಂಧಿಸಿದ ಸರಬರಾಜು ಸರಪಳಿ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಧಕ್ಕೆ ಬಾರದಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಜಿಲ್ಲಾ ಕಚೇರಿ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಸೂಚನೆ ಕೊಟ್ಟಿದ್ದಾರೆ.
ಗ್ರಾಾಹಕರಿಗೆ ಗೃಹ ಬಳಕೆಯ ಅಡುಗೆ ಅನಿಲ, ಸಿಲಿಂಡರ್‌ಗಳು, ಪೆಟ್ರೋಲ್, ಡೀಸೆಲ್, ಸೀಮೆ ಎಣ್ಣೆಯನ್ನು ಸಹ ಟರ್ಮಿನಲ್‌ಗಳಿಂದ ಎತ್ತುವಳಿ ಮಾಡಿಸಿ ನಿಗದಿತ ಸಮಯದೊಳಗೆ ಸರಬರಾಜು ಮಾಡುವಂತೆ ಸೂಚಿಸಲಾಗಿದೆ.
ಕಳೆದ 7ರಿಂದಲೇ ಇದು ಜಾರಿಗೆ ಬಂದಿದ್ದು, ಕಲಬುರಗಿ ಜಿಲ್ಲೆಯ ಉಪನಿರ್ದೇಶಕರ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಹರಿದಾಸ ಅವರನ್ನು 7.5.2021ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಬೆಳಗ್ಗೆ 8 ರಿಂದ ಮಧ್ಯಾಾಹ್ನ 2 ಗಂಟೆವರೆಗೆ ಕಂಟ್ರೋಲ್ ರೂಂಗೆ ನಿಯೋಜಿಸಲಾಗಿದೆ.
ಇದೇ ರೀತಿ ಅ್ಜಲ್‌ಪುರ ತಹಸೀಲ್ದಾಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಸೋಹೇಬ ಪಟೇಲ 7.5.2021 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಮಧ್ಯಾಾಹ್ನ 2 ರಿಂದ ರಾತ್ರಿ 10 ಗಂಟೆವರೆಗೆ ಕಂಟ್ರೋಲ್ ರೂಂಗೆ ನಿಯೋಜಿಸಲಾಗಿದೆ. ಕಲಬುರಗಿ ಜಿಲ್ಲೆಯ ಆಹಾರ ಶಾಖೆಯ ಕಾರ್ಯಾಲಯದ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಪ್ರಶಾಂತ್ ಅವರನ್ನು 7.5.2021 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಕಂಟ್ರೋಲ್ ರೂಂಗೆ ನಿಯೋಜಿಸಲಾಗಿದೆ.
ಸಾರ್ವಜನಿಕರಿಂದ ಬರುವ ದೂರುಗಳನ್ನು ಸ್ವೀಕರಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುವುದು, ತಾಲ್ಲೂಕು ಮಟ್ಟದ ದೂರುಗಳಿದ್ದಲ್ಲಿ ಸಂಬಂಧಪಟ್ಟ ಆಹಾರ ಶಿರಸ್ತೆದಾರರು, ಆಹಾರ ನಿರೀಕ್ಷಕರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿ ಕ್ರಮ ಕೈಗೊಳ್ಳಲು ಸೂಚಿಸಬೇಕು. ಸಹಾಯವಾಣಿ 08472-278678 ಇದಕ್ಕೆ ರವಿ ಎನ್.ಬೆಹರೆ ಇವರನ್ನು ನೋಡಲ್ ಅಧಿಕಾರಿಯನ್ನಾಾಗಿ ನೇಮಿಸಲಾಗಿದೆ.