ಮಂಗಳೂರು: ಫೆಂಗಲ್ ಚಂಡಮಾರುತ ದಿಕ್ಕು ಬದಲಾಯಿಸಿದ್ದು ಅರವ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ರಾಜ್ಯಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಡಿಸೆಂಬರ್ ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಇದೇ ವೇಳೆ, ಕೊಡಗು ಜಿಲ್ಲೆಯ ಶಾಲೆಗಳಿಗೂ ಡಿ.3ರಂದು ರಜೆ ಘೋಷಿಸಲಾಗಿದೆ.
ಕಾಸರಗೋಡು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೂ ನಾಳೆ ರಜೆ ಘೋಷಿಸಲಾಗಿದೆ.