ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಹಾಗೂ ಬಂಟ್ವಾಳ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲು ಅಯ್ಕೆ ಮಾಡಿರುವ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.
ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ದಾಖಲೆ ರೂ.7,561 ಕೋಟಿ ಅನುದಾನ ಒದಗಿಸಿಸುವ ಮೂಲಕ ಬಂಪರ್ ಕೊಡುಗೆಯನ್ನು ನೀಡಿರುವ ಕೇಂದ್ರ ಸರ್ಕಾರವು ಈಗಾಗಲೇ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಯ ಕುರಿತು ಟೆಕ್ನೊ-ಎಕೊನೋಮಿಕ್ ಫಿಸಿಬಲಿಟಿ ಅಧ್ಯಯನವನ್ನು ಪ್ರಾರಂಭಿಸಿದೆ. ಈ ಸಾಲಿನಲ್ಲಿ ರಾಜ್ಯ ರೈಲ್ವೆ ಯೋಜನೆಗಳಿಗೆ ನೀಡಿರುವ ಅನುದಾನವು 2014ಕ್ಕೆ ಹೋಲಿಸಿದಲ್ಲಿ 9 ಪಟ್ಟು ಅಧಿಕವಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.