ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ದಕ್ಷಿಣ ಕನ್ನಡ ಬಂದ್’ಗೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿರುವ ಹಿಂದೂ ಸಂಘಟಮನೆಗಳ ಮುಖಂಡರು, ಇದು ಮತಾಂಧರ, ಭಯೋತ್ಪಾದಕರ ಕೃತ್ಯ ಎಂದು ಆರೋಪಿಸಿದ್ದಾರೆ.
ಈ ನಡುವೆ ಸುಹಾಸ್ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಮುಖಂಡರು ಕರೆ ನೀಡಿದ್ದಾರೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆಯನ್ನು ನೀಡಲಾಗಿದೆ. ಮತ್ತು ಬೆಳಿಗ್ಗೆ 10:30ಗೆ ಎಜೆ ಆಸ್ಪತ್ರೆಯಿಂದ ಕಾರಿಂಜ ದ ತನಕ ಮೃತ ಸುಹಾಸ್ ಶೆಟ್ಟಿಯ ಪ್ರತೀವ ಶರೀರದ ಅಂತಿಮ ಯಾತ್ರೆ ನಡೆಯಲಿದೆ ಎಂದು VHP. ಮುಖಂಡರು ತಿಳಿಸಿದ್ದಾರೆ.