ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆದಾಯವತೆರಿಗೆ ಅಧಿಕಾರಿಗಳು ಸಂಚಲನ ಸೃಷ್ಟಿಸಿದ್ದಾರೆ. ಬೆಳ್ತಂಗಡಿಯಲ್ಲಿರುವ ಕಾಂಗ್ರೆಸ್ ನಾಯಕ ಗಂಗಾಧರಗೌಡ ಅವರ ಮನೆ ಮೇಲೆ ಐಟಿ ದಾಳಿ ಕೈಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ಅಧಿಕಾರಿಗಳು ದಾಳಿ ನಡೆದಿದೆ ಎನ್ಬಲಾಗಿದ್ದು, ಬೆಳ್ತಂಗಡಿಯಲ್ಲಿರುವ ಮಾಜಿ ಸಚಿವರೂ ಆದ ಗಂಗಾಧರ ಗೌಡ ಅವರ ಮನೆಗೆ ತೆರಳಿರುವ ಐಟಿ ಅಧಿಕಾರಿಗಳು ದಾಖಲೆಗಳಿಗಾಗಿ ಜಾಲಾಡಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡರ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್, ಇಂದುಬೆಟ್ಟುವಿನ ಮನೆಯಲ್ಕಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 20 ಮಂದಿ ಅಧಿಕಾರಿಗಳು, ಸಿಬ್ಬಂದಿಯನ್ಬೊಳಗೊಂಡ ಐಟಿ ತಂಡದಿಂದ ಈ ಕಾರ್ಯಾಚರಣೆ ನಡೆಸಿದೆ.