ದಾವಣಗೆರೆ: ಕೇಂದ್ರ ಸರಕಾರವು ದ್ವೇಷ ರಾಜಕಾರಣ ನಿಮಿತ್ತ ಇ.ಡಿ. ವಿಚಾರಣೆ ನೆಪದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರಾದ ಜಮೀರ್ ಅಹಮದ್, ಎಸ್.ಎಸ್. ಮಲ್ಲಿಕಾರ್ಜುನ, ಎಚ್. ಆಂಜನೇಯ, ಯುವ ಕಾಂಗ್ರೆಸ್ ಅಧ್ಯಕ್ಷ ನಲಪಡ್, ಪಕ್ಷದ ಜಿಲ್ಲಾಧ್ಯಕ್ಷ ಮಂಜಪ್ಪ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.





















































