ದಾವಣಗೆರೆ ಮೇಯರ್ ಗದ್ದುಗೆ ಬಿಜೆಪಿಗೆ.. . ಹಿಂದುತ್ವದ ಕಟ್ಟಾಳು ನೂತನ ಮೇಯರ್.
(ವರದಿ: ಹೆಚ್.ಎಂ.ಪಿ.ಕುಮಾರ್)
ದಾವಣಗೆರೆ: ಮ್ಯಾಂಚೆಸ್ಟರ್ ನಗರಿ ಬಿಜೆಪಿಯ ವಶವಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್
ಆಯ್ಕೆಯಾಗಿದ್ದಾರೆ.
ಬಿಜೆಪಿ 29 ಮತಗಳನ್ನು ಪಡೆಯುವ ಮೂಲಕ ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದೆ. ಕಾಂಗ್ರೆಸ್ 22 ಮತಗಳನ್ನು ಪಡೆಯುವಲ್ಲಿ ಮಾತ್ರ ಶಕ್ತವಾಗಿದೆ. ಈ 7 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮೇಯರ್, ಉಪಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ನಡೆದ ಮೇಯರ್ ಉಪಮೇಯರ್ ಮತದಾನ ನಡೆದಿತ್ತು. ದಾವಣಗೆರೆ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್‌ನಿಂದ ಗಡಿಗುಡಾಳ್ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಚಿವ ಆರ್ ಶಂಕರ್ , ಸಂಸದ ಜಿ ಎಂ ಸಿದ್ದೇಶ್ವರ್, ಚಿದಾನಂದಗೌಡ ಸೇರಿದಂತೆ ಬಿಜೆಪಿಯ 29 ಸದಸ್ಯರು ಭಾಗಿದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂರು ಎಂ ಎಲ್ ಸಿ ಗಳಾದ ಕೆ.ಸಿ.ಕೊಂಡಯ್ಯ, ರಘು ಆಚಾರ್ , ಯು.ಬಿ.ವೆಂಕಟೇಶ್ ಗೈರಾಗಿರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿ ಪಾಲಿಕೆ 22 ಸದಸ್ಯರು ಹಾಜರಾಗಿದ್ದರು. ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನಿನ್ನೆಯಷ್ಟೇ ಕಾಂಗ್ರೆಸ್‌ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರಿದ್ದರು.
ಇದರೊಂದಿಗೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಪಕ್ಕಾ ಆಗಿತ್ತು. ಇದರ ಮಧ್ಯೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿ ಗೆಲುವು ಸುಲಭವಾಯಿತು.




















































