ಬೆಳಗಾವಿ: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಭಾರಿಸುತ್ತಿದ್ದು ನಿತ್ಯವೂ ನೂರಾರು ಮಂದಿ ಈ ಅಗೋಚರ ವೈರಾಣು ದಾಳಿಯಿಂದಾಗಿ ಸಾವನ್ನಪ್ಪುತ್ತಿದ್ದಾರೆ. ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೂಡಾ ಕೋವಿಡ್ಗೆ ಬಲಿಯಾಗಿದ್ದಾರೆ.
ಕೃಷ್ಣ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿರುವ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ, ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆಗೊಳಗಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಸಚಿವ ಲಕ್ಷ್ಮಣ ಸವದಿ ಟ್ವೀಟ್ ಮಾಡಿ ತಮ್ಮ ಕುಟುಂಬಕ್ಕಾಗಿರುವ ನೋವನ್ನು ಹಂಚಿಕೊಂಡಿದ್ದಾರೆ.
ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ ಅವರ ಜೇಷ್ಠ ಪುತ್ರ ವಿನೋದ ಸವದಿ ಅವರು ಇಂದು ನಮ್ಮನ್ನು ಅಗಲಿದ್ದಾರೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. pic.twitter.com/tVQm8TTyiX
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) May 12, 2021