ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿರುವ ಸಿದ್ದರಾಮಯ್ಯ ಸರ್ಕಾರ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ.
ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು ನೌಕರ ವೃಂದಕ್ಕೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಇಂದು (ಮಂಗಳವಾರ) ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ 2024ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.