ಬೆಂಗಳೂರು: ಹಬ್ವ ಹರಿದಿನಗಳಂದು ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುವುದು ಸಾಮಾನ್ಯ. ಆದರೆ ಈ ಬಾರಿಯ ದೀಪಾವಳಿ ಸಂದರ್ಭದಲ್ಲಿ ಈ ಆಚರಣೆ ಮತ್ತಷ್ಟು ಅರ್ಥವನ್ನು ಮೆತ್ತಿಕೊಳ್ಳಲಿದೆ.
ದೀಪಾವಳಿಯ ಬಲಿಪಾಡ್ಯಮಿಯಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಆಯೋಜಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ಎಲ್ಲಾ ದೇವಾಲಯಗಳಿಗೆ ಸೂಚನೆ ನೀಡಿದೆ.
ದೀಪಾವಳಿಯ ಬಲಿಪಾಡ್ಯಮಿಯಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ ಆದೇಶಿಸಲಾಗಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ನಾಡಿನ ಸಂಸ್ಕೃತಿಯ ಪ್ರತೀಕವಾದ ಮೌಲ್ಯಯುತ ಆಚರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ದಿಟ್ಟ ಕ್ರಮ ಕೈಗೊಂಡಿದೆ ಎಂದು ಬಿಜೆಪಿಯು ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.
ದೀಪಾವಳಿಯ ಬಲಿಪಾಡ್ಯಮಿಯಂದು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ @BSBommai ಸರ್ಕಾರ ಆದೇಶಿಸಿದೆ. ನಾಡಿನ ಸಂಸ್ಕೃತಿಯ ಪ್ರತೀಕವಾದ ಮೌಲ್ಯಯುತ ಆಚರಣೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ದಿಟ್ಟ ಕ್ರಮ ಕೈಗೊಂಡಿದೆ. #ಜನಸ್ನೇಹಿಬಿಜೆಪಿಸರ್ಕಾರ pic.twitter.com/1y7aECltQH
— BJP Karnataka (@BJP4Karnataka) October 21, 2022
































































