ಬೆಂಗಳೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸಲು ಕಾಸ್ಮಿಕ್ ಬಿರ್ಲಾ ಗ್ರೂಪ್ ಪ್ರಸ್ತಾವನೆ ಸಲ್ಲಿಸಿದೆ. ಸುಮಾರು 1,300 ಹೆಕ್ಟೇರ್ ಪ್ರದೇಶದಲ್ಲಿ ₹16,000 ಕೋಟಿ ಅಂದಾಜು ಹೂಡಿಕೆಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕಾಸ್ಮಿಕ್ ಬಿರ್ಲಾ ಗ್ರೂಪ್ನ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮ್ಮನ್ನು ಮುಖ್ಯಮಂತ್ರಿಗಳ ಗಂಗಾ ನಿವಾಸದಲ್ಲಿ ಭೇಟಿ ಮಾಡಿ ಯೋಜನೆಯ ಪ್ರಸ್ತಾವನೆ ಸಲ್ಲಿಸಿತು ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ತಂತ್ರಜ್ಞಾನ ಸಹಭಾಗಿತ್ವ, ಅತ್ಯಾಧುನಿಕ ಉತ್ಪಾದನಾ ಘಟಕಗಳ ಸ್ಥಾಪನೆ ಹಾಗೂ ನುರಿತ ಉದ್ಯೋಗಾವಕಾಶಗಳ ಸೃಷ್ಟಿ ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ. ಯೋಜನೆಯ ಪ್ರಸ್ತಾವನೆಯನ್ನು ಸರ್ಕಾರ ಸೂಕ್ತವಾಗಿ ಪರಿಶೀಲಿಸಲಿದೆ ಎಂದು ನಿಯೋಗಕ್ಕೆ ಭರವಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಸ್ಮಿಕ್ ಬಿರ್ಲಾ ಗ್ರೂಪ್ನ ನಿರ್ದೇಶಕ ಲಕ್ಷ್ಮಣ್, ಗ್ಲೋಬಲ್ ಟೆಕ್ನೋಲಜಿ ಸಂಸ್ಥೆಯ ಎಂಡಿ ಕಿಶೋರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.















































































