ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಬಾಂಬ್ ಸ್ಫೋಟ ನಡೆದಿದೆ. ಈ ಘಟನೆಯಲ್ಲಿ ಆರು ವಾಹನಗಳು ಜಖಂಗೊಂಡಿವೆ.
ದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸ್ಫೋಟವನ್ನು ಭಯೋತ್ಪಾದಕರು ನಡೆಸಿರಬಹುದೇ ಅಥವಾ ಇನ್ಯಾವುದೇ ಅಚಾತುರ್ಯದಿಂದ ಘಟನೆ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಈ ಸ್ಫೋಟದ ನಂತರ ಇಡೀ ರಾಜಧಾನಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.