ನವದೆಹಲಿ: ಕುತೂಹಲಕಾರಿ ಬೆಳವಣಿಗೆಯಲ್ಲಿ ಅಬಕಾರಿ ನೀತಿ ಹಗರಣ ಆರೋಪದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಕೇಜ್ರಿವಾಲ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ದೆಹಲಿ ಸಿಎಂ ನಿವಾಸಕ್ಕೆ ದೌಡಾಯಿಸಿದ ಇಡಿ ಅಧಿಕಾರಿಗಳ ತಂಡ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಗುರಿಪಡಿಸಿ, ಬಳಿಕ ಬಂಧಿಸಿದೆ.