ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕು ಮರಣ ಮೃದಂಗ ಭಾರಿಸುತ್ತಿದೆ. ಸೋಂಕಿನ ಪ್ರಮಾಣವೂ ಹೆಚ್ಚಿದ್ದು, ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲೇ ಸೋಮವಾರ 95 ಪ್ರಕರಣಗಳು ಸೋಂಕು ಪತ್ತೆಯಾಗಿವೆ.
ಸೋಮವಾರ (ಜುಲೈ8) 892 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 197 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಡೆಂಗ್ಯೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ.
ಡೆಂಗ್ಯೂ ಕಾರಣದಿಂದಾಗಿ ಸಾವನ್ನಪ್ಪಿರುವ ಪ್ರಕರಣಗಳೂ ಮುಂದುವರಿದಿದ್ದು, ಮೈಸೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.