ಹೈದರಾಬಾದ್: ಆಂದ್ರಪ್ರದೇಶದ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದೆ. ಹೈದರಾಬಾದ್ ಸಮೀದ ನಾಂಪಲ್ಲಿ ನಿಲ್ದಾಣದಲ್ಲಿ ಬೆಳಗ್ಗೆ 9:15ರ ಸುಮಾರಿಗೆ ಈ ಘಟನೆ ನಡೆದಿದೆ.
ಚೆನ್ನೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲು ಅವಘಡಕ್ಕೀಡಾಗಿದ್ದು, ನಿಲ್ದಾಣ ಸಮೀಪಿಸುತ್ತಿದ್ದಂತೆಯೇ ಮೂರು ಬೋಗಿಗಳು ಹಳಿತಪ್ಪಿದೆ. ಈ ಅವಘಡದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


























































