ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿವಂಗತ ಕರುಣಾನಿಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ವಿಎಟಿ ಕಲಿವರಧನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಲ್ಲುಪುರಂ ಜಿಲ್ಲೆಯ ವಿಕ್ರವಾಂಡಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಕರುಣಾನಿಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆಗಳನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), ಮತ್ತು 505(ಐ)(ಸಿ) (ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಪ್ರಚೋದನೆ) ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಹಾಗಾಗಿ ಅವರನ್ನು ಬಂಧಿಸಲಾಗಿದೆ ಎಂದು ವಿಲ್ಲುಪುರಂ ಪೊಲೀಸಾರು ತಿಳಿಸಿದ್ದಾರೆ.
ತಮಿಳುನಾಡು ಮಹಿಳೆಯರ ಕಿರುಕುಳ ನಿಷೇಧ ಕಾಯ್ದೆ, 2022 ರ ಸೆಕ್ಷನ್ 4 ರ ಅಡಿಯಲ್ಲಿ ಅವರ ವಿರುದ್ಧ ಮತ್ತೊಂದು ಪ್ರಕರಣವೂ ಕಲಿವರಧನ್ ವಿರುದ್ಧ ದಾಖಲಾಗಿದೆ.