ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಶ್ರೀ ಎಸ್.ಎಲ್. ಧರ್ಮೇಗೌಡರ ನಿಧನಕ್ಕೆ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‌ಕುಮಾರ್ ಕಟೀಲ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಧರ್ಮೇಗೌಡರ ಅಕಾಲಿಕ ನಿಧನದಿಂದ ರಾಜ್ಯವು ಓರ್ವ ಅತ್ಯುತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿ ನೀಡಲಿ. ಅವರ ಕುಟುಂಬ, ಬಂಧುಮಿತ್ರರಿಗೆ ಅವರ ನಿಧನದ ಆಘಾತವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ನಳಿನ್ ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.