ದೆಹಲಿ: ಪ್ರಧಾನಿಯವರ ಡಿಜಿಟಲ್ ಇಂಡಿಯಾ ಕನಸಿಗೆ ಪುಷ್ಟಿ ನೀಡುವ ನಿಟ್ಟಿನಲ್ಲಿ ಹಾಗೂ ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ದೇಶದ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳ (ಡಿಬಿಯು) ಉದ್ಘಾಟನೆಯನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮಾಧ್ಯಮದ ಮೂಲಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿ ಕೆನರಾ ಬ್ಯಾಂಕ್ ಸ್ಥಾಪಿಸಿರುವ ‘ಡಿಜಿಟಲ್ ಬ್ಯಾಂಕಿಂಗ್ ಯೂನಿಟ್’ ಅನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಲಿಂಗಂ ಪ್ರಭಾಕರ್, ಬೆಂಗಳೂರು ಸರ್ಕಲ್ ಸಿ ಜಿ ಎಂ, ದೇಬಾನಂದ ಸಾಹೂ, ಹಾಗೂ ಉನ್ನತ ಅಧಿಕಾರಿಗಳು ಉಪಸ್ಥಿತಿದ್ದರು.
ಡಿಜಿಟಲ್ ಬ್ಯಾಂಕಿಂಗ್ ಯೂನಿಟ್ ಅಲ್ಲಿ ಲಭ್ಯವಿರುವ ಸೌಲಭ್ಯಗಳು:
- 24×7 ತೆರೆದಿರುವ ಸ್ವಯಂ ಸೇವಾ ವಲಯ
- ಡಿಜಿಟಲ್ ಅಸಿಸ್ಟೆನ್ಸ್ ಝೋನ್ ಅಲ್ಲಿ ಬ್ಯಾಂಕ್ ಅಧಿಕಾರಿಗಳು ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಗ್ ಕುರಿತು ಮಾರ್ಗದರ್ಶನ .
- ನಗದು ಹಿಂಪಡೆಯುವಿಕೆ ಮತ್ತು ಠೇವಣಿ
- ಖಾತೆ ತೆರೆಯುವಿಕೆ
- FD/RDe
- ಡಿಜಿಟಲ್ ಸಾಲಗಳು
- ಪಾಸ್‌ಬುಕ್ ಮುದ್ರಣ, ಬಾಕಿ ವಿಚಾರಣೆ
- ನಿಧಿ ವರ್ಗಾವಣೆ
























































