ಬೆಂಗಳೂರು: ಅಚ್ಚರಿಯ ನಿರ್ಧಾರವೊಂದರಲ್ಲಿ ಮೂರು ಜಿಲ್ಲಗಳಿಗೆ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಅವರನ್ನು ಕೋಲಾರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರನ್ನು ಬೀದರ್ ಜಿಲ್ಲೆಯ ಉಸ್ತುವಾರಿ ಮಂತ್ರಿಯನ್ನಾಗಿ ನೇಮಕ ಮಾಡಲಾಗಿದೆ.
ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್.ಶಂಕರ್ ಅವರನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸಿಎಂ ಯಡಿಯೂರಪ್ಪ ಅವರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.



























































