ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಜೀವನಾಂಶದ ಹಕ್ಕು ಅನ್ವಯಿಸುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಈ ಸಂಬಂಧ ಬುಧವಾರ ನೀಡಿರುವ ಆದೇಶ ಗಮನಸೆಳೆದಿದೆ.
ವಿಚ್ಛೇದಿತ ಪತ್ನಿಗೆ ಜೀವನಾಂಶ ಪಾವತಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ವಿಭಾಗೀಯ ಪೀಠವು ವಜಾಗೊಳಿಸಿದೆ. ಅಷ್ಟೇ ಅಲ್ಲ, ಪತ್ನಿಯ ಜೀವನಾಂಶದ ಕಾನೂನುಬದ್ಧ ಹಕ್ಕನ್ನು ಪ್ರತಿಪಾದಿಸುವ CRPC 125 ಕಲಂ ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದಿರುವ ಸುಪ್ರೀಂ ಕೋರ್ಟ್, ಜೀವನಾಂಶ ಕೋರುವ ಕಾನೂನು ಎಲ್ಲಾ ವಿವಾಹಿತ ಮಹಿಳೆಯರಿಗೆ ಅವರ ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ. ವಿಚ್ಛೇದಿತ ಮುಸ್ಲಿಂ ಮಹಿಳೆಯು ಜೀವನಾಂಶ ಕೋರಲು ಅವಕಾಶ ಇದೆ ಎಂದು ತೀರ್ಪಿನಲ್ಲಿ ಹೇಳಿದೆ.