ಮಂಡ್ಯ: ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನವು ಶನಿವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಪಲ್ಟಿಯಾಗಿದ್ದು, ಸ್ವಲ್ಪದರಲ್ಲೇ ದೊಡ್ಡ ಅಪಾಯ ತಪ್ಪಿದೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿಯ ಗೌಡಹಳ್ಳಿ ಟಿಎಂ ಹೊಸೂರು ಸಮೀಪ ಮಧ್ಯಾಹ್ನ 2.30ರ ಹೊತ್ತಿಗೆ ಸಂಭವಿಸಿದೆ. ಮಳೆಯಿಂದಾಗಿ ರಸ್ತೆಯ ಮೇಲೆ ವಾಹನ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿಯಾದ ನಂತರ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ಕಡೆ ನಡೆದಿದ್ದ ಕಾಂಗ್ರೆಸ್‌ನ ‘ಸಾಧನಾ ಸಮಾವೇಶ’ ಕಾರ್ಯಕ್ರಮ ಮುಗಿಸಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಬೆಂಗಾವಲು ಪಡೆಯ ಮುಂಭಾಗದ ಪೈಲಟ್ ವಾಹನ ಈ ಅಪಘಾತಕ್ಕೀಡಾಗಿದೆ. ಅತಿ ವೇಗದಲ್ಲಿ ಚಲಿಸುತ್ತಿದ್ದ ವಾಹನ ಮಳೆಯಿಂದ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್, ಆ ಮಾರ್ಗದಲ್ಲಿ ಆ ವೇಳೆಗೆ ಬೇರೊಂದು ವಾಹನ ಇರಲಿಲ್ಲ. ದುರಂತ ತಪ್ಪಿದಂತೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.