ನವದೆಹಲಿ: ರೈತ ವಿರೋಧಿ ಕಾಯ್ದೆಗಳು, ಕೊರೋನಾ ನಿರ್ವಹಣೆ ವೈಫಲ್ಯ, ರಾಜ್ಯದ ಆರ್ಥಿಕ ದುಸ್ಥಿತಿ, ಸಾಲದ ಹೊರೆ, ರಸಗೊಬ್ಬರ ಕೊರತೆ, ಜಿಡಿಪಿ ಕುಸಿತ, ನಿರುದ್ಯೋಗ, ಖಾಸಗೀಕರಣ ಸೇರಿದಂತೆ ರಾಜ್ಯದ ಸಮಸ್ಯೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ.
2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು ರಾಜ್ಯದ ವಿಚಾರಗಳನ್ನು ಅವರು ಮಂಡಿಸಿದ್ದಾರೆ.
‘ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಸಾಲದ ಹೊರೆ ಮತ್ತಷ್ಟು ಹೆಚ್ಚಿಸುವಂತಹ ನಿರ್ದೇಶನಗಳನ್ನು ನೀಡುತ್ತಿರುವುದನ್ನು ನಾವು ಗಮನಿಸಿದ್ದೇವೆ. ಅವೈಜ್ಞಾನಿಕ ಆರ್ಥಿಕ ನೀತಿ, ಕೋವಿಡ್, ನೆರೆ ನಿರ್ವಹಣೆ ವೈಫಲ್ಯ, ಜಿಡಿಪಿ ಶೇ. -23ಕ್ಕೆ ಕುಸಿದಿದೆ ಎಂದು ಬೊಟ್ಟು ಮಾಡಿದ್ದಾರೆ.
ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.3ಕ್ಕೆ ಕುಸಿದಿದ್ದು, ಬಿಜೆಪಿ ಹೊಗಳುವಂತಹ ಸಾಧನೆ ಏನೂ ಮಾಡಿಲ್ಲ. ಇಂತಹ ಪರಿಸ್ಥಿತಿ ನಡುವೆ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ತರಲು ಮುಂದಾಗಿದೆ. ಎರಡು ರೈತ ವಿರೋಧಿ ಮಸೂದೆ ಮಂಡಿಸಲಾಗಿದೆ ಎಂದರು.
ಕೃಷಿ ಪ್ರಧಾನ ದೇಶಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ ಮೂಲಕ ಸಾಲ ನೀಡಲು ಆತ್ಮನಿರ್ಭರ ಯೋಜನೆಯಲ್ಲಿ 5 ಲಕ್ಷ ಕೋಟಿ ಕೃಷಿ ಕ್ಷೇತ್ರಕ್ಕೆ ತೊಡಗಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ನೀಡಿರುವ ಸಾಲವನ್ನು ಸೇರಿಸಿ ರೈತರಿಗೆ 5 ಲಕ್ಷ ಕೋಟಿ ಸಾಲ ನೀಡುವುದಾಗಿ ಹೇಳಿಕೆ ನೀಡಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.