ಬೆಂಗಳೂರು: ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ರಾಜ್ಯ ಸರ್ಕಾರದ ವೈಫಲ್ಯಗಳತ್ತ ಬೊಟ್ಟು ಮಾಡಿದರು.
ಹೊಸ ಜಿಲ್ಲೆ ರಚನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನೂತನ ಜಿಲ್ಲೆ ರಚನೆ ಬಗ್ಗೆ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಬಂದ ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.