ಬೆಂಗಳೂರು: ಕೆಆರೆಸ್ ಬಿರುಕು ಬಗ್ಗೆ ನನಗೇನೂ ಗೊತ್ತಿಲ್ಲ. ಈ ಕುರಿಉ ನನ್ನ ಬಳಿ ಯಾರೂ ಪ್ರಸ್ತಾಪಿಸಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದ ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಕುರಿತ ವದಂತಿ ಹಾಗೂ ಸುಮಲತಾ-ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಮಂತ್ರಿಯಾಗಿದ್ದೆ. ನೀರಾವರಿ ಸಚಿವನಾಗಿಯೂ ಕೆಲಸ ಮಾಡಿದ್ದೆ. ಆಗ ಯಾರೂ ಕೂಡ ಅಕ್ರಮ ಗಣಿಗಾರಿಕೆ ಬಗ್ಗೆ ನನ್ನ ಬಳಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದರು.
10-15 ಕಿ.ಮೀ ದೂರದಲ್ಲಿ ಜಲ್ಲಿಕಲ್ಲಿ ಉತ್ಪಾದಿಸುವುದರಿಂದ ಹೆಚ್ಚು ವ್ಯತ್ಯಾಸವೇನೂ ಆಗುವುದಿಲ್ಲ ಎಂದು ಡಿಕೆಶಿ ಹೇಳಿದರು.
ಗಣಿ ಸಚಿವಾಲಯ ಇದೆ, ಇದಕ್ಕೆ ಕೆಲಸದ ವ್ಯಾಪ್ತಿ ಇದೆ. ಭೂ ವಿಜ್ಞಾನ ಇಲಾಖೆ ಇದೆ. ನೂರಾರು ಇಂಜಿನಿಯರ್ ಗಳೂ ಇದ್ದಾರೆ. ಅವರು ನೋಡಿಕೊಳ್ಳುತ್ತಾರೆ. ನಾವು ಅನಗತ್ಯವಾಗಿ ಜನರಲ್ಲಿ ಆತಂಕ ಮೂಡಿಸೋದು ಬೇಡ. ಇಂತಹ ಚಿಲ್ಲರೆ ಪ್ರಚಾರ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಇದು ಸೂಕ್ಷ್ಮ ವಿಚಾರ. ಕೆಆರೆಎಸ್ ದೇಶದ ಆಸ್ತಿ. ಅದರ ಬಗ್ಗೆ ಗಾಬರಿ ಹುಟ್ಟಿಸಬಾರದು ಎಂದವರು ಹೇಳಿದರು.