ದೊಡ್ಡಬಳ್ಳಾಪುರದಲ್ಲಿ ಎಎಪಿ ಅಭ್ಯರ್ಥಿ ಪರ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ರೋಡ್ ಷೋ.. ಪುರುಷೋತ್ತಮ್ ಗೆ ಅವಕಾಶ ನೀಡಿ ಎಂದ ಪೃಥ್ವಿರೆಡ್ಡಿ..
ದೊಡ್ಡಬಳ್ಳಾಪುರ: ವಿಧಾನಸಭಾ ಕ್ಷೇತ್ರ ಅಭಿವೃದ್ದಿ ವಿಚಾರದಲ್ಲಿ ಕಳೆದ 25 ವರ್ಷಗಳಿಂದ ಹೇಗಿತ್ತೋ ಈಗಲೂ ಅದೇ ರೀತಿ ಇದೆ ಯಾವುದೇ ಬೆಳವಣಿಗೆ ಕಂಡಿಲ್ಲ, ಇಲ್ಲಿನ ಶಾಸಕರಿಗೆ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಯಾವುದೇ ಇಚ್ಚಾಶಕ್ತಿ ಇಲ್ಲ ಎಂದು ಎಎಪಿ ರಾಜ್ಯಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಎಎಪಿ ಅಭ್ಯರ್ಥಿ ಪುರುಷೋತ್ತಮ್ ಪರ ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವೆಡೆ ರೋಡ್ ಷೋ ನಡೆಸಿ ಪ್ರಚಾರ ಕೈಗೊಂಡ ಅವರು,25 ವರ್ಷಗಳಿಂದ ಈ ಕ್ಷೇತ್ರದಲ್ಲಿ ಆಯ್ಕೆಯಾಗಿ ಬಂದ ಶಾಸಕರು ತಾಲ್ಲೂಕಿನ ಅಭಿವೃದ್ದಿಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ, ತಾಲ್ಲೂಕಿನ ಜನತೆಯಿಂದ ಶಾಸಕ ಸ್ಥಾನಕ್ಕೆ ಆಯ್ಕೆಯಾದ ಕೂಡಲೇ ತಮ್ಮ ಗಂಟು ಮೂಟೆಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಿ ರಿಯಲ್ ಎಸ್ಟೆಡಟ್ ಮತ್ತಿತರ ಕೆಲಸಗಳಲ್ಲಿ ತೊಡಗಿ ಮತ್ತೆ ಚುನಾವಣೆ ವೇಳೆಗೆ ಮಾತ್ರ ಕ್ಷೇತ್ರಕ್ಕೆ ಆಗಮಿಸುತ್ತಾರೆ ಎಂದರು.
ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಅಭಿವೃದ್ದಿ ಕೆಲಸಗಳನ್ನು ಮೆಚ್ಚಿ ಪಂಜಾಬ್ ರಾಜ್ಯದಲ್ಲೂ ಅಧಿಕಾರಕ್ಕೆ ಬಂದಿದ್ದೇವೆ, ಈಗ ಕರ್ನಾಟಕದಲ್ಲೂ ನಮ್ಮ ಆಮ್ ಆದ್ಮಿ ಪಕ್ಷ ಜನರಿಗೆ ಅಗತ್ಯವಾಗಿ ಬೇಕಾದ ಶಿಕ್ಷಣ,ಆರೋಗ್ಯ, ಉಚಿತ ವಿದ್ಯುತ್, ಉಚಿತ ಬಸ್ ಸೇವೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಿ ನಿರ್ಭೀತಿಯಿಂದ ಜನರು ಜೀವನ ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದವರು ಹೇಳಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಸ್ಥಳೀಯರಾದ ಪುರುಷೋತ್ತಮ್ ಅವರನ್ನು ಗೆಲ್ಲಿಸಿ ಎಂದು ಹೇಳುತ್ತಿಲ್ಲ ತಾಲ್ಲೂಕಿನ ಅಭಿವೃದ್ದಿಗಾಗಿ ಸೇವಕಮಾಗಿ ದುಡಿಯಲು ಒಂದು ಅವಕಾಶ ನೀಡಿ ಆಶೀರ್ವಾದ ಮಾಡಬೇಕು ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೆತ್ರದ ಎಎಪಿ ಅಭ್ಯರ್ಥಿ ಪುರುಷೋತ್ತಮ್ ಸೇರಿದಂತೆ ಸ್ಥಳೀಯ ಮುಖಂಡರು ರೋಡ್ ಶೋ, ಪ್ರಚಾರದಲ್ಲಿ ಭಾಗಿಯಾಗಿದ್ದರು.



















































