ದೊಡ್ಡಬಳ್ಳಾಪುರ: ಕೊರೊನಾ ಸಂದರ್ಭದಿಂದ ಹಿಡಿದು ಈವರೆಗೆ ಸಾಮಾಜಿಕ, ಆರೋಗ್ಯ, ಉದ್ಯೋಗ, ಶಿಕ್ಷಣ ಸೇವೆಗಳಲ್ಲಿ ತೊಡಗಿರುವ ಉತ್ಸಾಹಿ, ವಿದ್ಯಾವಂತ ಯುವಕ ಧೀರಜ್ ಮುನಿರಾಜರನ್ನು ಗೆಲ್ಲಿಸಬೇಕು ಎಂದು ನಟ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ಶಾಂತಿನಗರದ ಮುತ್ಯಾಲಮ್ಮ ತಾಯಿ ದೇವಾಲಯದಿಂದ ಆರಂಭವಾದ ರೋಡ್ ಶೋ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಯುವ ನಾಯಕರಿಗೆ ಈ ಬಾರಿ ಹೆಚ್ಚಿನ ಅವಕಾಶ ನೀಡಿರುವುದು ಒಳ್ಳೆಯ ಬೆಳವಣಿಗೆ. ವಿದ್ಯಾವಂತ ಯುವಕ ಧೀರಜ್ ಮುನಿರಾಜುಗೆ ಆಶೀರ್ವಾದ ಮಾಡಿ ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ನಾನು ಪ್ರಚಾರಕ್ಕೆ ಹೋದ ಕ್ಷೇತ್ರಗಳೆಲ್ಲಾ ಬಿಜೆಪಿ ಪರವಾದ ಉತ್ತಮ ವಾತಾವರಣ ಹೊಂದಿದೆ. ಅಭ್ಯರ್ಥಿಗಳು ಗೆದ್ದ ಬಳಿಕ ಜನರಿಗೆ ಒಳ್ಳೆಯ ಕೆಲಸ ಮಾಡಬೇಕು. ಕ್ಷೇತ್ರ ಅಭಿವೃದ್ಧಿಗೆ ಶ್ರಮ ವಹಿಸಬೇಕು. ಜನರು ಮುಗ್ದರಿದ್ದಾರೆ, ಗೆದ್ದ ಮೇಲೆ ಅವರಿಗೆ ಮೋಸ ಮಾಡಬೇಡಿ ಎಂದು ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದ ವೈಖರಿಯೂ ಗಮನಸೆಳೆಯಿತು.
ಸಚಿವ ಡಾ.ಸುಧಾಕರ್ ಮಾತನಾಡಿ
ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ 73 ಮಂದಿ ಹೊಸ ಯುವ ಮುಖಗಳಿಗೆ ಮಣೆ ಹಾಕಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಲಾಗುವುದು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಖ್ಯಾತ ನಟರಾದ ಶ್ರೀ @KicchaSudeep, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು.
ಬೃಹತ್ ಸಂಖ್ಯೆಯಲ್ಲಿ ಆಗಮಿಸುವ ಮೂಲಕ ದೊಡ್ಡಬಳ್ಳಾಪುರದ ಜನತೆ ಬೆಂಬಲ ಸೂಚಿಸಿದರು.#PoornaBahumata4BJP
1/2 pic.twitter.com/cUw3Cy537j
— Dr Sudhakar K (Modi ka Parivar) (@DrSudhakar_) May 6, 2023
ನೇಕಾರರ ಸಮುದಾಯಕ್ಕೆ ಹೆಚ್ಚು ಸೌಲಭ್ಯಗಳನ್ನು ನೀಡಿರುವುದು ಬಿಜೆಪಿ ಸರ್ಕಾರವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಗೌರವ ಸಲ್ಲಿಸಿದ್ದು, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ತಂದು 10 ಸಾವಿರ ಕೊಡಲಾಗುತ್ತಿದೆ. ಪ್ರತಿ ವರ್ಷ 52 ಲಕ್ಷ ರೈತರಿಗೆ ಹತ್ತು ಸಾವಿರ ಸಹಾಯಧನ ನೀಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಅಭಿವೃದ್ಧಿಗೆ ವೇಗ ನೀಡಬೇಕಾದರೆ ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಹೇಳಿದರು.
ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ, ನಗರಾಧ್ಯಕ್ಷ ಮುದ್ದಪ್ಪ, ತಾಲ್ಲೂಕು ಅಧ್ಯಕ್ಷ ನಾಗೇಶ್ ಮೊದಲಾದ ಮುಖಂಡರು ರೋಡ್ ಶೋ, ಪ್ರಚಾರದಲ್ಲಿ ಭಾಗಿಯಾಗಿದ್ದರು..