ದೊಡ್ಡಬಳ್ಳಾಪುರ: ವಿದ್ಯುತ್ ಸ್ಪರ್ಶಿಸಿ ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ.
ಮನುಶ್ರೀ (29), ಸಾವನ್ನಪ್ಪಿರುವ ಗೃಹಿಣಿ, ಹತ್ತು ವರ್ಷಗಳ ಹಿಂದೆ ಸಿಂಗನಾಯಕನಹಳ್ಳಿಯ ಅನುಶ್ರೀ ಪಾಲ್ ಪಾಲ್ ದಿನ್ನೆ ಗ್ರಾಮದ ಮೋಹನ್ ಕುಮಾರ್ ಎಂಬವರನ್ನು ಮದುವೆಯಾಗಿದ್ದರು.
ನಿನ್ನೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಗಂಡನ ಮನೆಯವರು ಜಾನುವಾರುಗಳಿಗೆ ಮಷಿನ್‌ನಲ್ಲಿ ಮೇವು ಕಟ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿರಬಹುದೆಂದು ಮೃತಳ ಹೆತ್ತವರು ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಈ ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು ಮನುಶ್ರೀ ಪತಿ ಮೋಹನ್ ಕುಮಾರ್‌ನನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.