ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ದಿನಪಯೋಗಿ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು
ಹಳೆ ಬಸ್ ನಿಲ್ದಾಣದಿಂದ ಬೈಕ್ ಗಳನ್ನು ಹಾಗು ಗ್ಯಾಸ್ ಸಿಲಿಂಡರ್’ನ್ನು ತಲೆಯ ಮೇಲೆ ಹೊತ್ತುಕೊಂಡು ತಾಲೂಕು ಕಚೇರಿ ವರೆಗೂ ಪಾದಯಾತ್ರೆ ನಡೆಸಿದರು. ಬೆಲೆಏರಿಕೆ ಬಗ್ಗೆ ಸಿಟ್ಟು ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಇದೇ ವೇಳೆ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಮಹಾಮಾರಿ ಕೊರೊನ ವೈರಸ್ ಮಧ್ಯಮ ವರ್ಗದವರ ಪಾಲಿಗೆ ಸಹಿಸಲಾರದ ಹೊಡೆತ ಬಿದ್ದಿದೆ. ಹಲವಾರು ಕಂಪನಿಗಳು ಬಾಗಿಲು ಮುಚ್ಚಿದ್ದು ಕಾರ್ಮಿಕರು ಅಪಾರ ಸಂಖ್ಯೆಯಲ್ಲಿ ನಿರೋದ್ಯೊಗಿಗಳಾಗಿದ್ದಾರೆ.
ವ್ಯಾಪಾರ ವ್ಯವಹಾರಗಳು ನೆಲ ಕಚ್ಚಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಭೀದಿ ಬದಿ ವ್ಯಾಪಾರಿಗಳು ಹೋಟೆಲ್ ಉದ್ದಿಮೆ ದಾರರು, ದಿನಗೂಲಿ ಕಾರ್ಮಿಕರ ಪರಿಸ್ಥಿತಿ ದಿಕ್ಕು ತೊಚದಂತಾಗಿದೆ. ಸಮಾಜದಲ್ಲಿ ಮಧ್ಯಮ ವರ್ಗದ ಜನರ ಆರ್ಥಿಕ ಪರಿಸ್ಥಿತಿ ಕೆಟ್ಟರು ಕೂಡ ಕೇಂದ್ರ ಸರ್ಕಾರ ಗಣನೆಗೆ ತೆಗೆದುಕೊಳ್ಳದೆ ಪೆಟ್ರೋಲ್, ಡೀಸೆಲ್ ಹಾಗು ಗ್ಯಾಸ್ ಬೆಲೆಯನ್ನು ದಿನದಿಂದ ದಿನಕ್ಕೆ ಬೆಲೆ ಏರಿಸುತ್ತಿರುವುದು ಮಧ್ಯಮ ವರ್ಗದ ಜನರಿಗೆ ಬದುಕು ನಡೆಸುವುದು ಕಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಕೇಂದ್ರ ಸರ್ಕಾರ ಹೆಚ್ಚೆತ್ತುಕೊಂಡು ಜನ ವಿರೋಧಿ ಬೆಲೆ ಏರಿಕೆಗೆ ಕಡಿವಾಣ ಹಾಕಿ ಸಾಮಾನ್ಯ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಾಯಕರು ತಾಲೂಕು ದಂಡಾಧಿಕಾರಿ ಶಿವರಾಜ್ ಅರವರಿಗೆ ಮನವಿ ಮಾಡಿದರು.