ದೊಡ್ಡಬಳ್ಳಾಪುರ:- ದೊಡ್ಡಬಳ್ಳಾಪುರ: ಸೂಕ್ತ ದಾಖಲೆಗಳಿಲ್ಲದೇ ಎಟಿಎಂಗಳಿಗೆ ತುಂಬಿಸುವ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು 4 ಕೋಟಿ ರೂ.ಗಳನ್ನು ಮಂಗಳವಾರ ಸಂಜೆ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರದ ಡಿ.ಕ್ರಾಸ್ ಬಳಿ ವಾಹನವನ್ನು ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು ಘಟನೆಯ ಬಗ್ಗೆ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಇಡಿ ಹಾಗೂ ಐಟಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ರೋಜಿಪುರದ ಎಟಿಎಂ ಗೆ ಸಾಗಿಸುತ್ತಿದ್ದ ಹಣ ಎಂದು ತಿಳಿದುಬಂದಿದೆ. ಆದರೆ, ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆ ಇರಲಿಲ್ಲ. ಹಾಗಾಗಿ ಹಣವನ್ನು ಪೊಲೀಸ್ ಠಾಣೆಗೆ ಸಾಗಿಸಲಾಗಿದೆ.ಅಕ್ರಮ ಹಣ ಸಾಗಾಟಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ದೂರು ನೀಡಿದ್ದಾರೆ.
























































