ಬೆಂಗಳೂರು: ಕೆಲವು ದಿನಗಳಿಂದ ಆಗಾಗ್ಗೆ ಸುರಿಯುತ್ತಿರುವ ಮಳೆ ರೈತಾಪಿ ಮಕ್ಕಳನ್ನು ಕಂಗಾಲಾಗಿಸಿದೆ. ಆಲಿಕಲ್ಲು ಮಳೆಯಿಂದಾಗಿ ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವ್ಯಾಪಕ ಬೆಳೆ ಹಾನಿ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಕಸವನಹಳ್ಳಿಯ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಹಾಗೂ ಗಾಳಿಯಿಂದ ಉಂಟಾದ ಬೆಳೆ ಹಾನಿ ಕುರಿತು ಪರಿಶೀಲನೆ ನಡೆಸಿ ಮಾಹಿತಿ ಪಡೆದರು.
ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಮೋಹನಕುಮಾರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಗುಣವಂತ ಸೇರಿದಂತೆ ಕೃಷಿ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.