ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ಅವರ ನಿಧನಕ್ಕೆ ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.
ದೊರೆಸ್ವಾಮಿ ನಿಧನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ನಾವು ಒಬ್ಬ ಹಿರಿಯ ಹೋರಾಟಗಾರರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ.
ಶತಾಯುಷಿ, ಹಿರಿಯ ಸಾಮಾಜಿಕ ಚಿಂತಕ ದೊರೆಸ್ವಾಮಿಯವರು ಅಗಲಿಕೆಯ ಸುದ್ದಿ ಕೇಳಿ ದುಃಖವಾಗಿದೆ.
ಶ್ರೀಯುತರ ಆತ್ಮಕ್ಕೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ.#ಓಂಶಾಂತಿಃ pic.twitter.com/MEjKa0tkpy
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) May 26, 2021
ಇದೇ ವೇಳೆ, ಶತಾಯುಷಿ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಮಂದಿರ ಪ್ರಕಾಶನದ ಮೂಲಕ ಹಲವು ಪುಸ್ತಕಗಳನ್ನು ಅವರು ಪ್ರಕಟಿಸಿದ್ದರು. ಸ್ವಾತಂತ್ರ್ಯ ಪೂರ್ವದಲ್ಲೇ “ಪೌರವಾಣಿ” ಪತ್ರಿಕೆಯ ಮೂಲಕ ಅವರು ಪತ್ರಿಕಾ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದರು. ದೊರೆಸ್ವಾಮಿ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.