ಬೆಂಗಳೂರು: ಇಂದು ಮಹಾನ್ ನಟರಾದ ಡಾ. ರಾಜ್‍ಕುಮಾರ್ ಅವರ ಜನ್ಮದಿನ. ಕನ್ನಡ ನಾಡಿನ ಸಂಸ್ಕøತಿ, ಭಾಷೆ ಮತ್ತು ಪರಂಪರೆಗಳನ್ನು ಉಳಿಸಿದ ಒಬ್ಬ ಶ್ರೇಷ್ಠ ಕಲಾವಿದರಾಗಿ ಡಾ. ರಾಜ್‍ಕುಮಾರ್ ಅವರು ಕೆಲಸ ಮಾಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸ್ಮರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‍ಕುಮಾರ್ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಮರ್ಪಿಸಿದ ಅವರು, ಕರ್ನಾಟಕದ ಕೀರ್ತಿಯನ್ನು ಒಬ್ಬ ನಟನಾಗಿ ಅವರು ಇನ್ನಷ್ಟು ವಿಸ್ತರಿಸಿದ್ದಾರೆ. ಅವರು ಪ್ರಾತಃಸ್ಮರಣೀಯರು. ರಂಗಭೂಮಿಯಿಂದ ಬಂದು ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡಿದ ಅವರು ಸಾವಿರಾರು ಜನರ ಆರಾಧ್ಯ ದೇವತೆಯಾಗಿದ್ದಾರೆ ಎಂದು ನುಡಿದರು.
ಅವರ ನೆನಪು, ಕೆಲಸಗಳು ಮತ್ತು ಆದರ್ಶಗಳು ಸದಾ ನಮಗೆ ಮಾರ್ಗದರ್ಶನ ನೀಡುತ್ತದೆ. ಅವರು ನಮಗೆ ಪ್ರೇರಣೆ ನೀಡಲಿದ್ದಾರೆ ಎಂದು ತಿಳಿಸಿದರು.
ಡಾ.ರಾಜ್ ಕುಮಾರ್ ಅವರ ಸ್ಮಾರಕಕ್ಕೆ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಚಿವರಾದ ಮುನಿರತ್ನ, ಗೋಪಾಲಯ್ಯ ಸಂಸದರಾದ ಮುನಿಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ಧರಾಜು, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ್, ಒಬಿಸಿ ಮೋರ್ಚಾ ಅಧ್ಯಕ್ಷರಾದ ನೆ.ಲ.ನರೇಂದ್ರಬಾಬು ಅವರು ಗೌರವ ಸಮರ್ಪಿಸಿದರು.