ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಯು.ಟಿ.ಇಫ್ತಿಕಾರ್ ಫರೀದ್ ಅವರು ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ನ್ಯಾಷನಲ್ ಕಮಿಷನ್ ಫಾರ್ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಪ್ರೊಫೆಷನ್ಸ್ ಆ್ಯಕ್ಟ್-2021 ರಡಿ ಈ ಹೊಸ ಸಂಸ್ಥೆಯನ್ನು ಸರ್ಕಾರ ಅಸ್ತಿತ್ವಕ್ಕೆ ತಂದಿದೆ. ಈ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಮಂಗಳೂರಿನ ಡಾ.ಎಂ.ವಿ.ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ.ಯು.ಟಿ.ಇಫ್ತಿಕಾರ್ ಫರೀದ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಸಹೋದರರೂ ಆಗಿರುವ ಯು.ಟಿ.ಇಫ್ತಿಕರ್ ಅವರು, ತಮ್ಮ ತಂದೆ ಯು.ಟಿ.ಫರೀದ್ ಹೆಸರಿನ ಫೌಂಡೇಶನ್ ಅಧ್ಯಕ್ಷರಾಗಿ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜೊತೆಯಲ್ಲೇ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ, ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಯೋಥೆರಪಿಸ್ಟ್ ಇದರ ಅಧ್ಯಕ್ಷರಾಗಿ ಸಂಘಟನಾತ್ಮಕ ವಿಚಾರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಸ್ಪೋರ್ಟ್ಸ್ ಆ್ಯಂಡ್ ಫಿಟೈಸ್ ಟೈನಿಂಗ್ ಫೆಡೆರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿರುವ ಇಫ್ತಿಕರ್ ಅವರು ಮುಂಚೂಣಿ ಸೇವೆ ಸಲ್ಲಿಸುತ್ತಿದ್ದಾರೆ.