ದೆಹಲಿ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿದೆ.
ಪದ್ಮ ಪ್ರಶಸ್ತಿ ಪುರಸ್ಕೃತ ಗಣ್ಯರಿಗೆ ಈ ಬಾರಿ ಮೇಲ್ಮನೆ ಸದಸ್ಯ ಸ್ಥಾನ ನೀಡಿ ಗೌರವಿಸುವ ನಿರ್ಧಾರ ಕೈಗೊಂಡ ಪ್ರಧಾನಿಮೋದಿ ಅವರು, ಕರ್ನಾಟಕದಿಂದ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಜೇರಳದಿಂದ ಮಾಜಿ ಅಥ್ಲೀಟ್ ಪಿಟಿ ಉಷಾ, ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್ , ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಖಂಡಿತವಾಗಿ ಇವರು ಸಂಸದೀಯ ನಡಾವಳಿಗಳನ್ನು ಮತ್ತಷ್ಟು ಉತ್ಕೃಷ್ಟ ಗೊಳಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. pic.twitter.com/KwoNdZyW6Z
— Narendra Modi (@narendramodi) July 6, 2022







































































