ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು ಮತ್ತಿಬ್ಬರು ಖದೀಮರನ್ನು ಬಂಧಿಸಿದ್ದಾರೆ.
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಜಾಲದ ಬಗ್ಗೆ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಗರದ ಕದ್ರಿ ಪಾರ್ಕ್ ಬಳಿ ಇಬ್ಬರನ್ನು ಸೆರೆ ಹಿಡಿಡಿದ್ದಾರೆ. ಆರೋಪಿಗಳಿಂದ 6 ಲಕ್ಷ ರೂ. ಮೌಲ್ಯದ 120 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.







































































