ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಬಿರುಸಾಗಿದ್ದು ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸರಣಿ ಅವಘಡಗಳೂ ಸಂಭವಿಸುತ್ತಿವೆ.
ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ, ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಮಂಗಳವಾರ) ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹೊರಡಿಸಿದ್ದಾರೆ.
ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು ನದಿ, ಸಮುದ್ರ ತೀರದ ಜನ ಎಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.