ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರು ಅವರು ಕೋವಿಡ್‌ನಲ್ಲಿ ಮೃತಪಟ್ಟವರ ಕುಟುಂಬದವರಿಗೆ ಆರ್ಥಿಕ ನೆರವಿನ ಭರವಸೆ ನೀಡಿದ್ದಾರೆ.
ಕೋವಿಡ್-19 ರಿಂದ ಮೃತಪಟ್ಟ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಅಸಗೋಡು ಗ್ರಾಮದ ಚಂದ್ರಮ್ಮ, ಹುಚ್ಚಂಗಿಪುರದ ಮಹೇಶ್ ಅವರ ಮನೆಗಳಿಗೆ ಭೇಟಿ ನೀಡಿದ ಸಚಿವರು ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಘೋಷಿಸಿರುವ ಪರಿಹಾರ ಕೋಡಿಸುವುದಾಗಿ ಭರವಸೆ ನೀಡಿದರು.
ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್. ವಿ.ರಾಮಚಂದ್ರ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್ ಹಾಗೂ ಇತರೆ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.