ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರು ನಮ್ಮನ್ನಗಲಿದ್ದಾರೆ. . ನಿರ್ಮಾಪಕರೂ ಆಗಿರುವ 81 ವರ್ಷ ವಯಸ್ಸಿನ ದ್ವಾರಕೀಶ್ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ನಡುವೆಯೇ ಅವರು ಹೃದಯಾಘಾತದಿಂದ ಅವರು ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದ ಅವರು, ರಾಜಕೀಯ ಚಟುವಟಿಕೆಗಳಲ್ಲೂ ಭಾಗಿಯಾಗುತ್ತಿದ್ದರು. ಶಿಕ್ಷಣ ನಂತರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಉದ್ಯಮ ನಡೆಸುತ್ತಿದ್ದ ದ್ವಾರಕೀಶ್ ಅವರು,1963ರಲ್ಲಿ ಸಿನೆಮಾ ನಟನೆಯತ್ತ ತೊಡಗಿಸಿಕೊಂಡರು. ನಟರಾಗಿ, ನಿರ್ಮಾಪಕರಾಗಿ ಚಿತ್ರೋದ್ಯಮದಲ್ಲಿ ದಿಗ್ಗಜನೆನಿಸಿದ ದ್ವಾರಕೀಶ್ ಅವರಿಗೆ, ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆಯನ್ನು ಪ್ರಶಂಸಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ.
ನೂರಾರು ಸಿನಿಮಾಗಳಲ್ಲಿ ನಟಿಸಿ, 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿರುವ ದ್ವಾರಕೀಶ್ ಅವರು, ಡಾ.ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸಹಿತ ಮೇರು ನಟರೊಂದಿಗೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.