ಉಡುಪಿ: ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರನ್ನು ಇಂದು ಮತ್ತೊಮ್ಮೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬೈಂದೂರು ಹೆಲಿಪ್ಯಾಡ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಂದಿಳಿದಾಗ ಚುನಾವಣೆ ಭದ್ರಾತಾ ಸಿಬ್ಬಂದಿ ಅವರ ಸರಕುಗಳನ್ನು ತಪಾಸಣೆ ಮಾಡಿದರು.ಚುನಾವಣಾಧಿಕಾರಿಗಳ ಈ ನಡೆ ಬಗ್ಗೆ ಡಿಕೆಶಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು. pic.twitter.com/BSwUJjhmHP
— DK Shivakumar (@DKShivakumar) April 23, 2023